2024-09-19 05:03:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

“ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ 

ಬೆಂಗಳೂರು :  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿರೀಕ್ಷಿತ ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾದ ನಂತರ ಗ್ಯಾರಂಟಿ ಯೋಜನೆಗಳು ನಿಲ್ಲಲಿವೆ ಎಂಬ ಸುದ್ದಿ ಎಲ್ಲೆಡೆ ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ, ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಈ ಬಾರಿ ಲೋಕಸಭೆಯಲ್ಲಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯಷ್ಟು ಫಲಿತಾಂಶ ಬಂದಿಲ್ಲ. ಒಂದರಿಂದ 9 ಸ್ಥಾನಕ್ಕೇರಿದ್ದು, ಕಳೆದ ಬಾರಿಗಿಂತ 13% ಹೆಚ್ಚು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ ಆದರೆ ನಿರೀಕ್ಷೆಯಂತೆ ಆಗಿಲ್ಲ. ಆದರೂ ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ, ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. 

ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ದೂರು ನೀಡಿರುವವರು ಯಾರು? ಸರ್ಕಾರ ಅಲ್ಲ, ಖಾಸಗಿ ವ್ಯಕ್ತಿ ದೂರು ನೀಡಿದ್ದು ಹೌದಲ್ವಾ? ಹೀಗಿರುವಾಗ ದ್ವೇಷದ ರಾಜಕಾರಣ ಎಲ್ಲಿದೆ? ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

Post a comment

No Reviews