
ನವದೆಹಲಿ: ಮುಂಬೈನಿಂದ 239 ಪ್ರಯಾಣಿಕರನ್ನು ಹೊತ್ತು ನ್ಯೂಯರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಸೋಮವಾರ ಬಾಂಬ್ ಬೆದರಿಕೆ ಬಂದಿದೆ.
ಭದ್ರತಾ ದೃಷ್ಟಿಯಿಂದ ಮರ್ಗ ಬದಲಾವಣೆ ಮಾಡಲಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
‘ಸದ್ಯ ವಿಮಾನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಹೆಚ್ಚಿನ ಶಿಷ್ಟಾಚಾರಗಳನ್ನು ಪಾಲಿಸಲಾಗುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Poll (Public Option)

Post a comment
Log in to write reviews