
ಬೆಂಗಳೂರು: ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ, ಜ್ಯೂಸ್ ಕುಡಿಸಿ ಮೊಬೈಲ್,ಪರ್ಸ್ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳಿಯೊಬ್ಬಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಲತಾ ಬಂಧಿತ ಮಹಿಳೆ. ಬಿಎಂಟಿಸಿ ಬಸ್‌ನಲ್ಲಿ ಒಂಟಿ ಪ್ರಯಾಣಿಕರನ್ನೇ ಪರಿಚಯ ಮಾಡಿಕೊಂಡು ಜ್ಯೂಸ್ ಕುಡಿಯಲು ಕರೆದುಕೊಂಡು ಹೋಗ್ತಿದ್ದಳು. ಜ್ಯೂಸ್ ಕುಡಿದು ಪ್ರಜ್ಞೆ ಕಳೆದುಕೊಂಡ ತಕ್ಷಣ ಮೊಬೈಲ್, ಪರ್ಸ್, ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದಳು.
ಈ ಬಗ್ಗೆ ಮಾಹಿತಿ ಪಡೆದ ಬ್ಯಾಟರಾಯನಪುರ ಪೊಲೀಸರು ಆಕೆಯನ್ನ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಠಾಣೆಗೆ ಕರೆತಂದ ಕೆಲವೇ ನಿಮಿಷಗಳಲ್ಲಿ ಹಿಳೆ ವಿಷಪೂರಿತ ಚಾಕೊಲೆಟ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಹಿಳೆ ಕುಸಿದುಬಿದ್ದ ನಂತರ ಪೊಲೀಸರು ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
Poll (Public Option)

Post a comment
Log in to write reviews