
ಬಾಗಲಕೋಟೆ: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಪ್ರಾಣಿ ಕೊಬ್ಬು ಬಳಸಲಾಗ್ತಿದೆ ಅನ್ನೋ ಗಂಭೀರ ಆರೋಪದ ಮಧ್ಯೆ ಕೆ.ಎಸ್.ಈಶ್ವರಪ್ಪ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಲಡ್ಡು ಪ್ರಸಾದದಲ್ಲಿ ಕೊಬ್ಬು ಬಳಕೆ ಆಗ್ತಿರೋದ್ರ ಹಿಂದೆ ಕ್ರಿಶ್ಚಿಯನ್ ಪಾದ್ರಿಗಳ ಪಾತ್ರವಿದೆ ಅಂತಾ ಅವರು ಆರೋಪಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಕನ್ವರ್ಟೆಡ್ ಕ್ರಿಶ್ಚಿಯನ್‌ಗಳಿಂದ ಇಂಥಾ ಕೃತ್ಯ ನಡೆದಿದೆ. ಆಂಧ್ರದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆಡಳಿತ ಅವಧಿಯಲ್ಲೇ ಹೀಗೇಕೆ ಆಯ್ತು ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಪರೋಕ್ಷವಾಗಿ ಹಿಂದಿನ ಜಗನ್ ಮೋಹನ್ ರೆಡ್ಡಿ ಸರ್ಕಾರದ ವಿರುದ್ಧ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.
Poll (Public Option)

Post a comment
Log in to write reviews