
ಬೆಂಗಳೂರು: ಜೆಡಿಎಸ್‌ನಿಂದ ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಚಾರವಾಗಿ ನಾನು ಅವಕಾಶ ಕೊಟ್ಟರೆ ಎನ್‌ಡಿಎ ಅಭ್ಯರ್ಥಿ ಆಗುತ್ತೇನೆ. ಆದರೆ ಅವಕಾಶ ಸಿಗಬೇಕು ಅಷ್ಟೇ. ನಾನು ನನ್ನ ಪಾರ್ನ್ಟರ್ ಕುಮಾರಸ್ವಾಮಿ ಮೂರು ದಿನಗಳಿಂದ ಚರ್ಚೆ ಮಾಡುತ್ತಿದ್ದೇವೆ. ನಾನು ಜೆಡಿಎಸ್‌ನಿಂದ ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಆದರೆ ಅವರು ಆಗಲ್ಲ ಅಂತಿದ್ದಾರೆ. ಕುಮಾರಸ್ವಾಮಿ ಮನಸ್ಸಿನಲ್ಲಿ ಅವರ ಮಗನಿಗೆ ಟಿಕೆಟ್ ಕೊಡಬೇಕು ಎಂದು ಆಸೆ ಇದೆ. ಅವರ ಮನಸಲ್ಲೇ ಆತರಹ ಇದ್ದರೆ ಏನು ಮಾಡೋದಕ್ಕೆ ಆಗುತ್ತದೆ ಎಂದು ಪ್ರಶ್ನಿಸಿದರು.
Poll (Public Option)

Post a comment
Log in to write reviews