ಬಾಲಿವುಡ್ ನಟ ಸಲ್ಮಾನ್ ಖಾನ್ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದ ಅಪರಿಚಿತ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿನನ್ನು ಬಾಂದ್ರಾ ಪೂರ್ವದ ನಿವಾಸಿ ಅಜಂ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ. 2 ಕೋಟಿ ರೂ. ಕೊಡದಿದ್ದರೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನ ಕೊಲ್ಲುವುದಾಗಿ ಅಪರಿಚಿತ ವ್ಯಕ್ತಿಯಿಂದ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವೊಂದು ಬಂದಿತ್ತು. ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಎನ್ಸಿಪಿ ಶಾಸಕ ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ ಜೀಶನ್ ಸಿದ್ದಿಕಿ ಹಾಗೂ ನಟ ಸಲ್ಮಾನ್ ಖಾನ್ ಇಬ್ಬರಿಗೂ ಜೀವ ಬೆದರಿಕೆ ಬಂದಿತ್ತು. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಮಂಗಳವಾರ ನೋಯ್ಡಾದಲ್ಲಿ 20 ವರ್ಷದ ಗುರ್ಫಾನ್ ಖಾನ್ ಎಂಬುವರನ್ನು ಬಂಧಿಸಿದ್ದಾರೆ. ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39ರಲ್ಲಿ ಬಂಧಿಸಲಾಗಿದೆ.
Post a comment
Log in to write reviews