
ವಿಜಯಪುರ : ರಸ್ತೆ ಬದಿ ನಿಂತಿದ್ದವರ ಮೇಲೆ ಬೈಕ್ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆಯು ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ನಡೆದಿದೆ. ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಈ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ತಾಳಿಕೋಟೆ ತಾಲೂಕಿನ ಗೋಟಖಂಡಕಿ ಗ್ರಾಮದ ನಿವಾಸಿ ಬೈಕ್ ಸವಾರ ನಿಂಗರಾಜ ಚೌಧರಿ (22), ದೇವರಹಿಪ್ಪರಗಿ ತಾಲೂಕಿನ ಹಂಚಲಿ ಗ್ರಾಮದ ನಿವಾಸಿ ಅನೀಲ ಖೈನೂರ (23) ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ ಗ್ರಾಮದ ನಿವಾಸಿ ಉದಯಕುಮಾರ ಪ್ಯಾಟಿ (19) ಮೃತದುರ್ದೈವಿಗಳು. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews