2024-09-19 04:38:44

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ! ಉಳಿದೆಡೆ ಹೇಗಿರಲಿದೆ?

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕ ಸ್ಥಳಗಳಲ್ಲಿ (Rain News) ಮಳೆಯಾಗಲಿದೆ. ಉತ್ತರ ಒಳನಾಡಿನ ಮಧ್ಯಮ ಮಳೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ವರದಿ ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಭಾಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ ಹಾಗೆ ಗಾಳಿ ವೇಗವು ಹೆಚ್ಚಲಿದೆ ಎಂದು ತಿಳಿಸಿದೆ.

ಯೆಲ್ಲೋ ಅಲರ್ಟ್‌!

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Post a comment

No Reviews