2024-12-24 05:40:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಶಾಕ್..!

ಬೆಂಗಳೂರು: ನಗರದ ಜನರಿಗೆ ಸದ್ಯದಲ್ಲೇ ಮೆಟ್ರೋ ಟಿಕೆಟ್‌ ದರ ಏರಿಕೆಯ ಶಾಕ್‌ ತಟ್ಟಲಿದ್ದು, ಈಗಾಗಲೇ ಹಲವು ಬಾರಿ‌ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​ಸಿಎಲ್​ ಪ್ಲಾನ್ ಮಾಡಿತ್ತು, ಆದರೆ ಟಿಕೆಟ್‌ ದರವನ್ನು ಹೆಚ್ಚಳ ಮಾಡಿರಲಿಲ್ಲ. ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ’ದಿ ಫೇರ್‌ ಪಿಕ್ಸೇಷನ್‌ ಕಮಿಟಿ’ (ಎಫ್‌ಎಫ್‌ಸಿ) ರಚನೆ ಮಾಡಿದ್ದು, ಸದ್ಯ 15 ರಿಂದ 20% ಟಿಕೆಟ್ ದರ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದೊಂದು ಸ್ವಾತಂತ್ರ ಕಮಿಟಿಯಾಗಿದ್ದು, ಅ.21 ರೊಳಗೆ ಪ್ರಯಾಣಿಕರ ಸಲಹೆ ಪಡೆದು ಟಿಕೆಟ್ ದರ ಏರಿಕೆಗೆ ಈ ಕಮಿಟಿ ಮುಂದಾಗಲಿದ್ದು, ಪ್ರಯಾಣಿಕರು ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ನೀಡಿದ್ದು, ಪ್ರಯಾಣಿಕರ ಸಲಹೆಯನ್ನ ffc@bmrc.co.in ಗೆ ಕಳಿಸುವಂತೆ ಸೂಚನೆ ನೀಡಲಾಗಿದೆ.

2017ರ ನಂತರ ಇದೀಗ ಮೆಟ್ರೋ ದರ ಏರಿಕೆಗೆ ತೀರ್ಮಾನ ಮಾಡಿದೆ‌‌. ಮೆಟ್ರೋ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ. ಈಗಾಗಲೇ ಹಾಲು, ಪೆಟ್ರೋಲ್, ಡಿಸೇಲ್ ದರ ಹೆಚ್ಚಳ ಮಾಡಲಾಗಿದೆ. ಇದೀಗ ಮತ್ತೆ ಮೆಟ್ರೋ ದರ ಏರಿಕೆ ಮಾಡುವುದು ಸರಿಯಲ್ಲ ಎಂಬುದು ಪ್ರಯಾಣಿಕರ ಮಾತು.

ಈಗಾಗಲೇ ನಮ್ಮ ಮೆಟ್ರೋದ ಟಿಕೆಟ್ ದರ ಕನಿಷ್ಠ ದರ 10 ರೂ ಆಗಿದ್ದು, ಗರಿಷ್ಠ ದರ 60 ರೂ. ವರೆಗೆ ಇದೆ. ಈಗ 15 ರಿಂದ 20 ರಷ್ಟು ಟಿಕೆಟ್ ದರ ಏರಿಕೆ ಆಗಲಿದೆಯಂತೆ.

ನಿವೃತ್ತ ನ್ಯಾಯಾಧೀಶರು ಮತ್ತು ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳನ್ನೊಳಗೊಂಡ ಕಮಿಟಿ ಇದಾಗಿದ್ದು, ಕಮಿಟಿಯು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಲಿದೆ. ನಮ್ಮ ಖರ್ಚು,ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ ಅಂತಾರೇ ಬಿಎಂಆರ್​ಸಿಎಲ್​​ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್. ಸದ್ಯ ಈ ಬಗ್ಗೆ ಕಮಿಟಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ‌.

Post a comment

No Reviews