
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಇನ್ನೂ ದರ್ಶನ್ ಜಾಮೀನು ಮಂಜೂರು ಕಾರಣ ದರ್ಶನ್ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ದರ್ಶನ್‌ನ ಪ್ರತಿಯೊಂದು ಚಲನವಲನದ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.
ಸದ್ಯ ಬೆಂಗಳೂರಿನ ಹೊಸಕೆರೆಹಳ್ಳಿ ನಿವಾಸದಲ್ಲಿ ಬೀಡುಬಿಟ್ಟಿರುವ ನಟ ದರ್ಶನ್ ಇಂದು ಮಗ ವಿನೀಶ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ.
ಇನ್ನೂ ದರ್ಶನ್ ಆರ್.ಆರ್ ನಗರದ ನಿವಾಸದ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ದರ್ಶನ್ ಮನೆ ಸಂಪರ್ಕಿಸುವ ಎರಡೂ ಕಡೆಯ ರಸ್ತೆಗಳಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮನೆಯ ಬಳಿ ದರ್ಶನ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇರುವುದರಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಆರ್.ಆರ್ ನಗರ ದರ್ಶನ್ ಮನೆ ಬಳಿ 2 ಕೆಎಸ್‌ಆರ್‌ಪಿ ತುಕಡಿ, ಆರ್.ಆರ್ ನಗರ ಪೊಲೀಸರು ಸೇರಿದಂತೆ 55ಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದೆ.
Poll (Public Option)

Post a comment
Log in to write reviews