
ಬೆಂಗಳೂರು : ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
22 ವರ್ಷದ ಪೂಜಾ ಆತ್ಮಹತ್ಯೆ ಶರಣಾದ ಯುವತಿ ಎಂದು ತಿಳಿದು ಬಂದಿದೆ. ಪೂಜಾ ಮೂಲತಃ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ತೆಗ್ಗಿ ಬಸಾಪುರದವವಳಾಗಿದ್ದು ಗಂಡನ ಮನೆಯಲ್ಲಿ ಅತ್ತೆ ಮತ್ತು ಗಂಡ ವರದಕ್ಷಿಣೆ ಕೋಡುವುದಾಗಿ ಕಿರುಕುಳ ನೀಡುತ್ತಿದ್ದರು ಇದ್ದರಿಂದ ಬೇಸತ್ತ ಮಹಿಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಹಾಕಿಕ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸದ್ಯ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆಂದು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಗಂಗಮ್ಮನ ಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Poll (Public Option)

Post a comment
Log in to write reviews