
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಕಳೆದ 15-20 ದಿನಗಳಿಂದ ಚಿರತೆ ಓಡಾಡುತ್ತಿರುವುದು ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆಗೆ ಮುಂದಾಗಿದೆ.
ಭಾನುವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವಿವಿಯ ಅಮರ್ ಜವಾನ್ ವೃತ್ತದಿಂದ ಗ್ರಂಥಾಲಯ ಮಾರ್ಗವಾಗಿ ಮಲಪ್ರಭಾ ವಸತಿ ನಿಲಯದವರೆಗೆ ಚಿರತೆ ಹಿಡಿಯುವ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸಂಚಾರ ನಿಷೇಧಿಸಲಾಗಿದೆ. ಸಿಬ್ಬಂದಿ, ಸ್ಥಳೀಯರು ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು, ಈ ರಸ್ತೆಯಲ್ಲಿ ನಿಗದಿತ ಸಮಯದಲ್ಲಿ ಓಡಾಡದಂತೆ ಕವಿವಿ ಪ್ರಕಟಣೆ ಹೊರಡಿಸಿದೆ.
ಸುತ್ತಮುತ್ತಲಿನ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಓಡಾಟ ಮಾಡುತ್ತಿದೆ. ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ಎಮ್ಮೆ, ಕರುಗಳನ್ನು ತಿಂದು ಹಾಕಿತ್ತು. ಅಂದಿನಿಂದ ಚಿರತೆ ಕಾಟ ಶುರುವಾಗಿದೆ. 20 ದಿನಗಳ ಹಿಂದೆ ಚಿರತೆ ರಸ್ತೆ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
Poll (Public Option)

Post a comment
Log in to write reviews