
ಚೆನ್ನೈ: ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್ನಲ್ಲಿ ನಡೆದ ಏರ್ ಶೋ ನಡೆಸಲಾಗಿದ್ದು, ಇನ್ನೂ ಈ ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವಾಗಿದ್ದು, 230ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.
ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ ಬಿಸಿಲಿನ ತಾಪಕ್ಕೆ ಜನರ ನಡುವೆ ನೂಕು ನುಗ್ಗಲು ಸಂಭವಿಸಿದ್ದು, ಈ ವೇಳೆ ಉಸಿರಾಡಲಾಗದೇ 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. 100 ಕ್ಕೂ ಹೆಚ್ಚು ಜನರಿಗೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯ ರಸ್ತೆಯಲ್ಲಿ ವಾಹನ ಸಂದಣಿ ಹಾಗೂ ಜನಸಂದಣಿ ಏರ್ಪಟ್ಟಿತ್ತು. ಮೃತರನ್ನು ಜಾನ್, ತಿರುವೊಟ್ಟಿಯೂರು ಮೂಲದ ಕಾರ್ತಿಕೇಯನ್, ದಿನೇಶ್ ಕುಮಾರ್, ಪೆರುಂಗಲತ್ತೂರಿನ ಶ್ರೀನಿವಾಸನ್, ಎಂದು ಗುರುತಿಸಲಾಗಿದೆ.
Poll (Public Option)

Post a comment
Log in to write reviews