
ಉತ್ತರ ಪ್ರದೇಶ: ರೈಲ್ವೆ ಹಳಿಯ ಮೇಲೆ ಮಲಗಿದ್ದವನ ಮೇಲೆ ರೈಲು ಹರಿದರು ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆಯ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.
ಇಂದು ಮುಂಜಾನೆ 3.30ರ ಸುಮಾರಿಗೆ ಬಿಜ್ನೋರ್ ನಗರದ ಆದಂಪುರ ರೈಲ್ವೇ ಕ್ರಾಸಿಂಗ್‌ನಲ್ಲಿ ವ್ಯಕ್ತಿಯೊಬ್ಬರು ರೈಲಿಗೆ ಡಿಕ್ಕಿ ಹೊಡೆದಿರಬಹುದು ಎಂದು ರೈಲು ಚಾಲಕ ಪೊಲೀಸರಿಗೆ ವರದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದಾಗ, ನೇಪಾಳದ ಅಮರ್ ಬಹದ್ದೂರ್ ಎಂಬ ವ್ಯಕ್ತಿ ರೈಲ್ವೆ ಹಳಿಯ ಮಧ್ಯದಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅದೃಷ್ಟವಶಾತ್, ಅಮರ್ ಬಹದ್ದೂರ್ ಜೀವಂತವಾಗಿದ್ದಾರೆ.
ಈ ಘಟನೆಯ ವಿಡಿಯೋ ವೈರಲ್ ಆಗಿದ್ದು. ರೈಲು ಚಾಲಕ ಆರಂಭದಲ್ಲಿ ಹೆದರಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನಂತರ ಬಹದ್ದೂರ್ ಅವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
Poll (Public Option)

Post a comment
Log in to write reviews