ಟಾಪ್ 10 ನ್ಯೂಸ್
ರೈಲ್ವೆ ಕಾಮಗಾರಿ ಕೈಗೊಂಡ ಕಾರಣ ಹುಬ್ಬಳ್ಳಿ ಮತ್ತು ವಿಜಯವಾಡ ನಡುವಿನ ರೈಲು ಸೇವೆ ತಾತ್ಕಾಲಿಕ ಸ್ಥಗಿತ

ಗುಂಟೂರು ವಿಭಾಗದ ವ್ಯಾಪ್ತಿಯಲ್ಲಿ ರೈಲ್ವೆ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಂಡ ಪರಿಣಾಮ ಹುಬ್ಬಳ್ಳಿ ಮತ್ತು ವಿಜಯವಾಡ ನಿಲ್ದಾಣಗಳ ನಡುವೆ ರೈಲುಗಳ ಸಂಚಾರವನ್ನು ಮೇ ೧೬ರಿಂದ ತಾತ್ಕಾಲಿಕವಾಗಿ ರದ್ದು ಪಡಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ.
ರದ್ದಾದ ರೈಲುಗಳು:
ರೈಲು ಸಂಖ್ಯೆ 17329 ಎಸ್.ಎಸ್.ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್ಪ್ರೆಸ್ ರೈಲನ್ನು ಮೇ.16 ರಿಂದ 31 ರವರೆಗೆ ರದ್ದುಗೊಳಿಸಲಾಗುತ್ತಿದೆ.
ರೈಲು ಸಂಖ್ಯೆ 17330 ವಿಜಯವಾಡ - ಎಸ್.ಎಸ್.ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ರೈಲನ್ನು ಮೇ.17 ರಿಂದ ಜೂನ್ 1 ರವರೆಗೆ ರದ್ದುಗೊಳಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews