
ಬೆಂಗಳೂರು: ವಿಶೇಷ ಚೇತನ ಸರ್ಕಾರಿ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ.
ವಿಶೇಷ ಚೇತನರನ್ನು ಸರ್ಕಾರಿ ಕೆಲಸಕ್ಕೆ ನೇಮಕಾತಿ ಮಾಡಿಕೊಂಡ ನಂತರ ಅವರಿಗೆ ಒಡಾಡಲು ಹತ್ತಿರವಾಗುವಂತೆ ಅವರ ವಾಸ ಸ್ಥಳದ ಹತ್ತಿರಕ್ಕೆ ಅವರನ್ನು ನಿಯೋಜನೆ ಮಾಡಬೇಕು ಅಂತ ಆದೇಶದಲ್ಲಿ ತಿಳಿಸಲಾಗಿದೆ. ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ನಿಯಮಗಳನ್ನು ರೂಪಿಸಬೇಕು. ಅಲ್ಲದೇ ವಿಶೇಷ ಚೇತನ ನೌಕರರನ್ನು ವರ್ಗಾವಣೆ ಮಾಡುವ ಮೊದಲು ಆತನ ಫ್ಯಾಮಿಲಿ ಬ್ಯಾಕ್‌ಗ್ರೌಂಡ್ ತಿಳಿದುಕೊಂಡು ಅಗತ್ಯಕ್ಕೆ ತಕ್ಕಂತೆ ವರ್ಗಾವಣೆಯಿಂದ ವಿನಾಯಿತಿ ನೀಡಬೇಕು ಅಂತ ಆದೇಶದಲ್ಲಿ ತಿಳಿಸಿದೆ.
ಸಾರ್ವತ್ರಿಕ ವರ್ಗಾವಣೆಯ ಅವಧಿಯಲ್ಲಿ ಅಂಗವಿಕಲ ನೌಕರರಿಗೆ ತೊಂದರೆಯಾಗದಂತೆ ಎಲ್ಲಾ ಸಕ್ಷಮ ಪ್ರಾಧಿಕಾರಗಳು ಎಚ್ಚರಿಕೆವಹಿಸಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
Poll (Public Option)

Post a comment
Log in to write reviews