ಶೀಘ್ರವೇ ಬಸ್ ಪ್ರಯಾಣದ ದರ ಏರಿಕೆಯಾಗಲಿದೆ ಎಂದು ಶಾಕ್ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ !

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಡೀಸೆಲ್ ಹಾಗೂ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿದ ಬೆನ್ನಲ್ಲೇ ಜನಸಾಮಾನ್ಯರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬೆಲೆ ಏರಿಕೆಯ ಸುಳಿವನ್ನು ನೀಡಿದ್ದಾರೆ. ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಸಾರಿಗೆ ಇಲಾಖೆಗೆ ಡೀಸೆಲ್ ಬೆಲೆ ಏರಿಕೆಯಿಂದ ಮತ್ತಷ್ಟು ಹೊರೆ ಬಿದ್ದಿದೆ. ಇದೆಲ್ಲವನ್ನೂ ನೀಗಿಸುವುದು ಸಾರಿಗೆ ನಿಗಮಗಳಿಗೆ ಕಷ್ಟವಾಗುತ್ತಿದೆ. ಈ ನಷ್ಟವನ್ನು ಸರ್ಕಾರವಾದರೂ ಭರಿಸಿಕೊಡಬೇಕು ಇಲ್ಲವೇ ದರವಾದರೂ ಹೆಚ್ಚಿಸಲೇ ಬೇಕಿದೆ ಎಂದು ಬುಧವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ಶಕ್ತಿ ಯೋಜನೆಯಿಂದ 1,100 ಕೋಟಿ ರೂಪಾಯಿ ಬಾಕಿ ಬರಬೇಕಿದೆ. ಮತ್ತೂಂದೆಡೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಹತ್ತು ಸಾವಿರ ಟ್ರಿಪ್‌ಗಳನ್ನು ಹೆಚ್ಚಿಸಲಾಗಿದೆ. ಪ್ರತಿದಿನ ಸಾಕಷ್ಟು ಬಸ್ ಗಳು ಎಲ್ಲಾ ರೂಟ್ ಗಳಲ್ಲಿ ಸಂಚರಿಸುತ್ತಲೇ ಇರುತ್ತವೆ. ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಬೇಕಿದೆ. ಬಿಡಿ ಭಾಗಗಳ ಬೆಲೆಯೂ ಹೆಚ್ಚಿದೆ ಈ ಎಲ್ಲರ ಕಾರಣಗಳಿಂದ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಹಾಗಾಗಿ ಶೀಘ್ರವೇ ಟಿಕೆಟ್ ದರಗಳನ್ನು ಕೊಂಚ ಏರಿಸಲಾಗುವುದು ಎಂದು ಹೇಳಿದ್ದಾರೆ.
Poll (Public Option)

Post a comment
Log in to write reviews