
ನಗರದ ಪ್ರಮುಖ ರಸ್ತೆ ಹಾಗೂ ಉಪ ಮುಖ್ಯ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.
ಗುರುವಾರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಮಳೆಯಿಂದ ನಗರದಲ್ಲಿ ರಸ್ತೆ ಗುಂಡಿ ಸೃಷ್ಟಿಯಾಗುತ್ತಿದ್ದು, ಗುಂಡಿಗಳನ್ನು ಗುರುತಿಸಿ ತ್ವರಿತಗತಿಯಲ್ಲಿ ಮುಚ್ಚಬೇಕು. ವಲಯ ಆಯುಕ್ತರು ರಸ್ತೆ ಗುಂಡಿ ಪರಿಶೀಲನೆ ನಡೆಸಿ ಮುಚ್ಚುವುದಕ್ಕೆ ಕ್ರಮ ಕೈಗೊಳ್ಳಬೇಕು. ರಸ್ತೆ ನಿರ್ವಹಣೆ ಅವಧಿ ಮುಕ್ತಾಯಗೊಳ್ಳದ ರಸ್ತೆಗಳಲ್ಲಿ ಗುಂಡಿ ಸೃಷ್ಟಿಯಾದರೆ ಸಂಬಂಧ ಪಟ್ಟ ಗುತ್ತಿಗೆದಾರರರಿಗೆ ತಿಳಿಸಿ ಮುಚ್ಚಿಸಬೇಕು ಎಂದು ಸೂಚಿಸಿದ್ದಾರೆ.
Poll (Public Option)

Post a comment
Log in to write reviews