
ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಎಂಡಿಎಂಎ ಸೇರಿದಂತೆ ಒಟ್ಟು 16,13,800 ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಬೆಂಗಳೂರಿಂದ ಮಾದಕ ವಸ್ತುವನ್ನು ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು.
ಆರೋಪಿಗಳು ಮಂಗಳೂರು ಉಳ್ಳಾಲದ ಬಸ್ತಿಪಡ್ಪುವಿನ 35 ವರ್ಷದ ಮುಹಮ್ಮದ್ ಇಶಾನ್ ಮತ್ತು ಟಿಸಿ ರೋಡ್ ನ 35 ವರ್ಷದ ಜಾಫರ್ ಸಾಧಿಕ್ ಎಂದು ಪೊಲೀಸರು ತಿಳಿಸಿದ್ದಾರೆ.
Poll (Public Option)

Post a comment
Log in to write reviews