
ವಿಜಯಪುರ: ಮೀನು ಹಿಡಿಯಲು ತೆರಳಿದಾಗ ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದ ಕೆರೆಯಲ್ಲಿ ನಡೆದಿದೆ. ರೋಹಿತ್ ಅನೀಲ ಚವ್ಹಾಣ ಹಾಗೂ ವಿಜಯ ಚವ್ಹಾಣ ಮೃತ ಬಾಲಕರು.
ಕೆರೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅದನ್ನು ಗಮನಿಸದೆ ಯುವಕರು ನೀರಿಗೆ ಇಳಿದದ್ದಾರೆ. ಆಗ ವಿದ್ಯುತ್ ಶಾಕ್ ಹೊಡೆದು ಈ ದುರಂತ ಸಂಭವಿಸಿದೆ. ಇಬ್ಬರು ಬಾಲಕರ ಮೃತ ದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Tags:
Poll (Public Option)

Post a comment
Log in to write reviews