2024-12-24 06:36:33

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪೊಲೀಸರ ಮಹತ್ತರ ಕಾರ್ಯಾಚರಣೆಯಿಂದ ಇಬ್ಬರು ಸೈಬರ್​ ಖದೀಮರ ಬಂಧನ

ಹಾವೇರಿ:  ಸೈಬರ್​​ ಕ್ರೈಂ ಪೊಲೀಸರು ಮಹತ್ತರ ಕಾರ್ಯಾಚರಣೆ ನಡೆಸಿ, ಇಬ್ಬರು ಸೈಬರ್ ಕಳ್ಳತನದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಮೂಲದ ರೂಪೇಶ್ ಹೆಚ್​.ಎಂ. ಹಾಗೂ ಚಿಕ್ಕಮಂಗಳೂರಿನ ಚೇತನ್ ಎಂ.ಎಸ್​. ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿತರು ಹಾವೇರಿ ಜಿಲ್ಲೆ ಸೇರಿದಂತೆ ವಿವಿಧೆಡೆ ಕಂಪ್ಯೂಟರ್, ಲ್ಯಾಪ್‌ಟಾಪ್​ಗಳನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದರು. ಆರೋಪಿಗಳಿಂದ ಲ್ಯಾಪ್‌ಟಾಪ್ ಮತ್ತು ಸ್ಮಾರ್ಟ್​​ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತಂತೆ ಹಾವೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಕಾರ್ಯಾಚರಣೆಗೆ ಎಸ್​​ಪಿ ಅಂಶುಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

 

Post a comment

No Reviews