
ಚಾಮರಾಜನಗರ: ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯ ಮತ್ತು ಯಳಂದೂರು ವನ್ಯಜೀವಿ ವಲಯ ವಿಭಾಗದಲ್ಲಿ ಎರಡು ಆನೆ ಕಳೇಬರಗಳು ಪತ್ತೆಯಾಗಿವೆ.
ಬೈಲೂರು ವಲಯದ ಆಳದ ಕೆರೆಯ ಬಳಿ 45-50 ವರ್ಷದ ಗಂಡಾನೆ ಕಳೇಬರ ಪತ್ತೆಯಾಗಿದ್ದು, 7-8 ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಳಂದೂರು ವಲಯದ ಬೇತಾಳಕಟ್ಟೆ ಎಂಬಲ್ಲಿ ಮತ್ತೊಂದು ಗಂಡಾನೆ ಆನೆ ಕಳೇಬರ ಪತ್ತೆಯಾಗಿದ್ದು, ಇದು 20-40 ದಿನಗಳ ಹಿಂದೆ ಮೃತಪಟ್ಟಿರಿಬಹುದು ಎಂದು ಅಂದಾಜು ಮಾಡಲಾಗಿದೆ. ಎರಡು ಆನೆಗಳ ದಂತಗಳು ಸುರಕ್ಷಿತವಾಗಿದ್ದು, ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ.
ಇನ್ನು, ಆನೆ ಕಳೇಬರ ಬಹಳ ತಡವಾಗಿ ಪತ್ತೆ ಆಗಿರುವ ಬಗ್ಗೆ ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಕಿಡಿಕಾರಿದ್ದು, ಒಂದಾನೇ ಮೃತಪಟ್ಟು 7-8 ತಿಂಗಳು, ಇನ್ನೊಂದಾನೆ ಸತ್ತು 20-40 ದಿನಗಳಾಗಿದೆ. ಇದು ಅರಣ್ಯ ಇಲಾಖೆಯ ಗಸ್ತಿನ ವೈಖರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Poll (Public Option)

Post a comment
Log in to write reviews