
ಉತ್ತರಪ್ರದೇಶ ಅಲಿಗಢದ ಮೆಹಂದಿ ಗ್ರಾಮದಲ್ಲಿ ಮೇ 8 ರಂದು ತ್ರಿವಳಿ ಕೊಲೆ ನಡೆದಿದೆ. ಹುಚ್ಚು ಹಿಡಿದ ವ್ಯಕ್ತಿಯೊಬ್ಬ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ದಾಳಿ ಮಾಡಿದ್ದಾನೆ. ಇಬ್ಬರನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದಾನೆ.
ಬಳಿಕ ಅದರಲ್ಲಿ ಒಬ್ಬನನ್ನು ಜೀವಂತ ದಹಿಸಿದ್ದಾನೆ. ಘಟನೆಯಲ್ಲಿ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಷಯ ತಿಳಿದ ಗ್ರಾಮಸ್ಥರು ಹುಚ್ಚನನ್ನು ಸುತ್ತುವರೆದು ಬಡಿದು ಕೊಂದಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸ್ಥಳ ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗ್ರಾಮಸ್ಥರನ್ನು ವಿಚಾರಣೆಗೊಳಪಡಿಸಿ ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Poll (Public Option)

Post a comment
Log in to write reviews