
ಬೆಂಗಳೂರು : ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿಯಾಗಿರುವ ಪ್ರಕರಣ ಬಿಬಿಎಂಪಿಯ ಪೂರ್ವ ವಲಯದಲ್ಲಿ ದಾಖಲಾಗಿವೆ.
ಜ್ವರದಿಂದ ಬಳಲುತ್ತಿದ್ದ 27 ವರ್ಷದ ಯುವಕ ಸಿ.ವಿ.ರಾಮನ್ ನಗರದ ವಾಸಿ ಅಭಿಲಾಷ್ ಜೂ.25 ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಡೆಂಗ್ಯೂ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು, ಚಿಕಿತ್ಸೆ ಫಲಕಾರಿಯಾಗದೇ ಜೂ.27 ರಂದು ಮೃತಪಟ್ಟಿದ್ದಾರೆ. ಅಲ್ಲದೆ ಮತ್ತೊಂದೆಡೆ ತಮಿಳುನಾಡಿನ ಮೂಲದವರಾದ 80 ವರ್ಷದ ವೃದ್ಧೆ ನೀರಜಾದೇವಿ ಸ್ತನ ಕ್ಯಾನ್ಸರ್ ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಜೂ.20 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೃದ್ಧೆಗೆ ಡೆಂಘೀ ಇರುವುದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗದೇ ಜೂ.23ರಂದು ಮೃತಪಟ್ಟಿದ್ದಾರೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳಿಂದ ಮಾಹಿತಿ ನೀಡಿದ್ದಾರೆ.
Poll (Public Option)

Post a comment
Log in to write reviews