
ಬಾಗಲಕೋಟೆ: ಕಾಂಗ್ರೆಸ್‌ನ ಜಿಲ್ಲಾಡಳಿತ ಭವನ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಖಂಡಿಸಿ, ಜಿಲ್ಲಾ ರಾಜ್ಯಪಾಲರ ಪ್ರತಿಕೃತಿ ದಹಿಸುತ್ತಿದ್ದಾಗ ಇಬ್ಬರು ಕಾರ್ಯಕರ್ತರಿಗೆ ಬೆಂಕಿ ತಗುಲಿದ ಘಟನೆ ಸೋಮವಾರ ( ಆಗಸ್ಟ್ 19) ದಂದು ನಡೆದಿದೆ.
ಕಾಂಗ್ರೆಸ್ ಪ್ರತಿಭಟನೆ ವೇಳೆ ಗುಳೇದಗುಡ್ಡ ಸಮೀಪದ ನಾಗರಾಳ ಎಸ್ಪಿ ಗ್ರಾಮದ ದ್ಯಾವಪ್ಪ ಮಾಗಿ, ಬೀಳಗಿ ತಾಲೂಕಿನ ಗಿರಿಸಾಗರದ ಹನುಮಂತ ಗಾಯಗೊಂಡಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುವಾಗ ಇವರ ಬಟ್ಟೆಗೆ ಬೆಂಕಿ ತಗುಲಿದ್ದು, ತಕ್ಷಣ ಸ್ಥಳದಲ್ಲಿದ್ದ ಪೊಲೀಸರು, ಇತರೆ ಕಾರ್ಯಕರ್ತರು ಬೆಂಕಿ ನಂದಿಸಿದರು. ಬಳಿಕ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಸದ್ಯ ಅವರ ಆರೋಗ್ಯ ಚೇತರಿಸಿಕೊಂಡಿದ್ದು, ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಾಸಕ ಎಚ್.ವೈ.ಮೇಟಿ ಸೇರಿ ಪಕ್ಷದ ಮುಖಂಡರು, ನಾಯಕರು ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
Poll (Public Option)

Post a comment
Log in to write reviews