
ಮಂಡ್ಯ: ಕಳೆದ ಹಿಂದೆಯಷ್ಟೇ ನಾಗಮಂಗಲದಲ್ಲಿ ನಡೆದಿದ್ದ ಕೋಮುಗಲಭೆ ಕಿಡಿ, ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿತ್ತು. ಈ ಕಹಿನೆನಪು ಮಾಸುವ ಮುನ್ನವೇ ಅದೇ ಜಿಲ್ಲೆಯ ಮಾಚನಹಳ್ಳಿಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದು, ಇಬ್ಬರಿಗೆ ಚಾಕು ಇರಿತವಾಗಿದೆ.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಚಿನ್ ಹಾಗೂ ನಂಜುಂಡಸ್ವಾಮಿ ಇರಿತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಗಣೇಶ ವಿಸರ್ಜನೆ ವೇಳೆ ಸ್ನೇಹಿತರ ಜೊತೆ ಡ್ಯಾನ್ಸ್ ಮಾಡುತ್ತಿರುವ ವೇಳೆ ದರ್ಶನ್ ಹಾಗೂ ಲೋಕೇಶ್ ಏಕಾಏಕಿ ಬಂದು ಚಾಕು ಇರಿದು ಪರಾರಿಯಾಗಿದ್ದಾರೆ .
ಹಳೆ ದ್ವೇಷದ ಹಿನ್ನೆಲೆಯಲ್ಲಿ ಗ್ರಾಮದ ದರ್ಶನ್ ಮತ್ತು ಆತನ ಸಹಚರರು ಸಚಿನ್ ಹಾಗೂ ನಂಜುಂಡಸ್ವಾಮಿ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews