
ಹಾಸನ : ನಗರದ ಹೊಯ್ಸಳನಗರ ಬಡಾವಣೆಯಲ್ಲಿ ದುಷ್ಕರ್ಮಿಗಳು ಹಾಡಹಗಲೇ ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ನಗರದ ಮುಖ್ಯ ರಸ್ತೆಯಲ್ಲಿ ನಿಸ್ಸಾನ್ ಟೆರಾನೊ ಕಾರ್ ನಿಂತಿದ್ದು, ಅದರ ಎದುರಿನಲ್ಲಿ ಗುಂಡಿನ ದಾಳಿಯಿಂದ ಮೃತಪಟ್ಟ ಇಬ್ಬರ ಮೃತದೇಹಗಳು ಬಿದ್ದಿವೆ. ಆದರೆ ಮೃತರ ಗುರುತು ಮತ್ತವರ ಪೋಷಕರ ಬಗ್ಗೆ ಹೆಚ್ಚಿನ ಮಾಹಿತಿ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೀತಾ ದೌಡಾಯಿಸಿದ್ದು, ಬೆರಳಚ್ಚು ತಜ್ಞರು ಹಾಗು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸಾಕ್ಷಿ ಕಲೆಹಾಕುತ್ತಿದ್ದಾರೆ
Poll (Public Option)

Post a comment
Log in to write reviews