ಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಭಾನುವಾರ ನಗರದ ಮರವೂರು ಫಲ್ಗುಣಿ ನದಿಯಲ್ಲಿ ಸಂಭವಿಸಿದೆ. ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನೀರುಪಾಲಾಗಿದ್ದಾರೆ.
ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆಯ ಬಳಿಯ ಫಲ್ಗುಣಿ ನದಿಯಲ್ಲಿ ನಾಲ್ವರು ಯುವಕರು ಈಜಲು ಹೋಗಿದ್ದರು. ಸುಮಿತ್ ಹಾಗೂ ಅನೀಶ್ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಜೊತೆಗಿದ್ದ ಕೋಡಿಕಲ್ ನಿವಾಸಿಗಳಾದ ಅರುಣ್(19) ಹಾಗೂ ದೀಕ್ಷಿತ್(18) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಆಗಮಿಸಿ, ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಜ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Post a comment
Log in to write reviews