ತಮಿಳುನಾಡು: ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಅವರನ್ನು ನೇಮಕ ಮಾಡಲಾಗಿದ್ದು, ಇಂದು ಮಧ್ಯಾಹ್ನ 3.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸದ್ಯ ಅಸ್ತಿತ್ವದಲ್ಲಿರುವ ಕ್ರೀಡಾ ಸಚಿವ ಸ್ಥಾನದ ಜೊತೆಗೆ, ಉದಯನಿಧಿ ಅವರಿಗೆ ಯೋಜನೆ ಮತ್ತು ಅಭಿವೃದ್ಧಿಯ ಖಾತೆಯನ್ನು ಸಹ ನೀಡಲಾಗಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಉದಯನಿಧಿ ಅವರಿಗೆ ಈಗಿರುವ ಖಾತೆಗಳ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ಮಂಜೂರು ಮಾಡಿ ಉಪಮುಖ್ಯಮಂತ್ರಿ ಹುದ್ದೆಗೆ ನಿಯೋಜಿಸುವಂತೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಶಿಫಾರಸು ಮಾಡಿದ್ದರು.
ಬಳಿಕ ಮಹತ್ವದ ಕ್ಯಾಬಿನೆಟ್ ಪುನರ್ ರಚನೆಯಲ್ಲಿ, ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಿಸಿದೆ. ಶಿವ ವಿ.ಮೆಯ್ಯನಾಥನ್ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ನೇಮಕಗೊಂಡರೆ, ಎನ್.ಕಯಲ್ವಿಝಿ ಸೆಲ್ವರಾಜ್ ಅವರು ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮಾಜಿ ಸೈನಿಕರ ಕಲ್ಯಾಣ ಖಾತೆಗಳನ್ನು ವಹಿಸಿಕೊಳ್ಳಲಿದ್ದಾರೆ. ಹಾಗೇ ಎಂ.ಮತಿವೆಂಥನ್ ಅವರು ಆದಿ ದ್ರಾವಿಡರ್ ಮತ್ತು ಗಿರಿಜನ ಕಲ್ಯಾಣದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
Post a comment
Log in to write reviews