
ಬೆಳಗಾವಿ: ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆಯೊಂದು ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಆರೋಪಿಯೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಆತನ ಕುಕೃತ್ಯದಿಂದ ಸ್ಥಳದಲ್ಲಿದ್ದವರು ಧರ್ಮದೇಟು ಕೊಟ್ಟಿದ್ದಾರೆ. ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ.
ಪ್ರಕರಣ ಒಂದರ ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಆತ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಪೆಟ್ಟು ಬಿದ್ದಿದೆ. ಕೋರ್ಟ್ ಒಳ ಭಾಗದಲ್ಲೇ ಆತನಿಗೆ ಪೆಟ್ಟು ಬಿದ್ದಿದೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದ ಪೊಲೀಸರು ಅಲ್ಲಿಂದ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಜಯೇಶ್ ಪೂಜಾರ್ ಈ ಹಿಂದೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಜೈಲಿನಿಂದ ಜೀವ ಬೆದರಿಕೆ ಹಾಕಿದ್ದ. ಈ ಕೇಸ್ ಹಿನ್ನೆಲೆಯಲ್ಲಿ ಕೋರ್ಟ್ ಗೆ ಕರೆ ತರಲಾಗಿತ್ತು. ಆರೋಪಿ ಜಯೇಶ್ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಕೋರ್ಟ್ ನಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತಾ ಪಾಕ್ ಪರ ಘೋಷಣೆ ಕೂಗಿರುವುದಾಗಿ ಅವನೆ ಹೇಳಿದ್ದಾನೆ.
Poll (Public Option)

Post a comment
Log in to write reviews