
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ(Jyotiraditya Scindia) ಅವರ ತಾಯಿ ಮಾಧವಿ ರಾಜೆ ಸಿಂಧಿಯಾ(Madhavi Raje Scindia) ಅವರು ಮೇ 15ರ ಬೆಳೆಗ್ಗೆ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿದ್ದ ಮಾಧವಿ ರಾಜೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ನ್ಯೂಮೋನಿಯಾದಿಂದ ಬಳಲುತ್ತಿದ್ದ ಮಾಧವಿ ರಾಜೆ ಅವರು ದಿಲ್ಲಿಯ ಏಮ್ಸ್ ಆಸ್ಪತ್ರೆಯ(AIIMS Delhi) ತುರ್ತು ನಿಗಾ ಘಟಕದಲ್ಲಿ ಕಳೆದ ಮೂರು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಬಹಳಷ್ಟು ಏರುಪೇರಾಗಿದ್ದು, ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಮೇ 15ರ ಬೆಳಗ್ಗೆ 9.28ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಗ್ವಾಲಿಯರ್‌ನಲ್ಲಿ ಅಂತ್ಯಕ್ರಿಯೆ
ಮಾಧವಿರಾಜೆ ಅವರ ಅಂತ್ಯಕ್ರಿಯೆಯನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವರು ಪಕ್ಷದ ಮುಖಂಡರು, ರಾಜಕಾರಣಿಗಳು ಭಾಗಿಯಾಗುವ ಸಾಧ್ಯತೆ ಇದೆ.
Poll (Public Option)

Post a comment
Log in to write reviews