
ತುಮಕೂರು: ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಜನ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವ ವಿ.ಸೋಮಣ್ಣ ಗರಂ ಆಗಿದ್ದಾರೆ. ಸಿಇಒ ಪ್ರಭು, ಡಿಸಿ ಶುಭಾ ಕಲ್ಯಾಣ್ ಮೇಲೆ ವಿ.ಸೋಮಣ್ಣ ಕಿಡಿಕಾರಿದ್ದಾರೆ.
ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ವಿ.ಸೋಮಣ್ಣ ಮೊದಲಿಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ನಂತರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಜಿಲ್ಲಾಡಳಿತದ ಯಾವೊಬ್ಬ ಅಧಿಕಾರಿಗಳು ಇಲ್ಲದನ್ನು ಕಂಡು ಗರಂ ಆದ ಸಚಿವ ಸೋಮಣ್ಣ, ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರನ್ನು ತರಾಟೆಗೆ ತೆಗೆದುಕೊಂಡರು.
Poll (Public Option)

Post a comment
Log in to write reviews