ಬೆಂಗಳೂರು; ಜುಲೈ 23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು ಈ ಬಜೆಟ್‌ನಲ್ಲಿ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳ ವಿರುದ್ಧ ‘ತಾರತಮ್ಯ’ ಮಾಡಿರುವುದನ್ನು ವಿರೋಧಿಸಿ ಇಂಡಿಯಾ ಒಕ್ಕೂಟವು ಇಂದು (ಜುಲೈ 24) ಸಂಸತ್ತಿನಲ್ಲಿ ಮತ್ತು ಸಂಸತ್ತಿನ ಹೊರಗೆ ಪ್ರತಿಭಟನೆಯನ್ನು ನಡೆಸಲಿದೆ.
ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ತನ್ನ ಮಿತ್ರ ಪಕ್ಷಗಳಾದ ಜೆಡಿಯು ಮತ್ತು ಟಿಡಿಪಿ ಆಡಳಿತವಿರುವ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಮೀಸಲಾಗಿ ಬಹುತೇಕ ಯೋಜನೆಗಳನ್ನು ಘೋಷಿಸಿದೆ. ಕರ್ನಾಟಕ, ಪಂಜಾಬ್ ಸೇರಿದಂತೆ ಹಲವಾರು ರಾಜ್ಯಗಳನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ. ವಿಪಕ್ಷಗಳನ್ನು ಇದನ್ನು ತೀವ್ರವಾಗಿ ವಿರೋಧಿಸಿದೆ.
ಬಜೆಟ್‌ನಲ್ಲಿರುವ ತಾರತಮ್ಯದ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ವೇಣುಗೋಪಾಲ್, “ಈ ವರ್ಷದ ಕೇಂದ್ರ ಬಜೆಟ್ ಈಗಾಗಲೇ ಬಜೆಟ್‌ನ ಪರಿಕಲ್ಪನೆಯನ್ನು ನಾಶಪಡಿಸಿದೆ. ಬಹುತೇಕ ರಾಜ್ಯಗಳ ವಿರುದ್ಧ ಸಂಪೂರ್ಣವಾಗಿ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಇಂಡಿಯಾ ಒಕ್ಕೂಟವು ಈ ಬಜೆಟ್ ವಿರುದ್ಧ ಪ್ರತಿಭಟಿಸುತ್ತದೆ” ಹಾಗೆ ತಮ್ಮ ಪ್ರತಿಭಟನೆಯ ಭಾಗವಾಗಿ ವಿಪಕ್ಷ ಆಡಳಿತವಿರುವ ರಾಜ್ಯದ ಮುಖ್ಯಮಂತ್ರಿಗಳು ಜುಲೈ 27ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲಿದ್ದಾರೆ. “ಈ ಸರ್ಕಾರದ ಧೋರಣೆ ಸಂಪೂರ್ಣವಾಗಿ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ. ನಿಜ, ತಾರತಮ್ಯದ ಬಣ್ಣಗಳನ್ನು ಮರೆಮಾಡಲು ವಿನ್ಯಾಸಗೊಳಿಸಲಾದ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುವುದಿಲ್ಲ” ಎಂದು ವೇಣುಗೋಪಾಲ್ ತಿಳಿಸಿದರ
Post a comment
Log in to write reviews