
ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ಹೇರಿಕೆ ಹಿನ್ನಲೆ ಸಾಕಷ್ಟು ಚರ್ಚೆಗಳಾಗುತ್ತಿತ್ತು. ಆದರೆ ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅಂಗನವಾಡಿ ಶಿಕ್ಷಕರಿಗೆ ಉರ್ದು ಕಡ್ಡಾಯ ಭಾಷೆಯನ್ನಾಗಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಇನ್ನು ರಾಜ್ಯ ಸರ್ಕಾರದ ಈ ಆದೇಶಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ ಬಿಜೆಪಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉರ್ದು ಹೇರಿಕೆ ಮಾಡಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಅಂಗನವಾಡಿ ಶಿಕ್ಷಕರ ಹುದ್ದೆಗೆ ನೇಮಕಗೊಳ್ಳಲು ಉರ್ದು ಕಡ್ಡಾಯವಾಗಿ ಬರಬೇಕಂತೆ ಎಂದು ಬರೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ನವರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಮೂಡಿಗೆರೆ ಇರುವುದು ಕರ್ನಾಟಕದಲ್ಲಿ, ಕರ್ನಾಟಕದಲ್ಲಿ ಕನ್ನಡ ಅಧಿಕೃತ ಭಾಷೆ, ಅಂತಹದರಲ್ಲಿ ಉರ್ದು ಕಡ್ಡಾಯ ಏಕೆ..?? ಉತ್ತರಿಸಿ ಎಂದು ಬಿಜೆಪಿ ಪ್ರಶ್ನಿಸಿದೆ.
ಕರ್ನಾಟಕದಲ್ಲಿ ಅದು ಅಂಗನವಾಡಿಯಲ್ಲಿ ಮಕ್ಕಳಿಗೆ ಪಾಠ ಮಾಡಲು ಕನ್ನಡ ಗೊತ್ತಿದ್ದರೆ ಸಾಕಲ್ಲವೇ.? ನಿಮ್ಮ ರಾಜಕೀಯಕ್ಕಾಗಿ ಅಮಾಯಕ ಮಕ್ಕಳು ಹಾಗೂ ಶಿಕ್ಷಕರನ್ನು ಬಲಿ ಕೊಡಬೇಡಿ.. ಎಂದು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದೆ.
Poll (Public Option)

Post a comment
Log in to write reviews