
ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ, ಪ್ರಾಣಿಗಳ ಕೊಬ್ಬನ್ನು ಬಳಸಿದ ಆರೋಪದ ಬಗ್ಗೆ ತನಿಖೆ ನಡೆಸಲು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡ ರಚಿಸುವುದಾಗಿ ಹೇಳಿದ್ದಾರೆ.
ಲಡ್ಡುವಿನಲ್ಲಿ ತುಪ್ಪ ಕಲಬೆರಕೆ ಮತ್ತು ಕೈಗೊಂಡಿರುವ ಕ್ರಮಗಳ ವರದಿಯ ಪ್ರತಿಯನ್ನು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಟಿಟಿಡಿ ಸಲ್ಲಿಸಿದೆ. ವರದಿ ಬಂದ ನಂತರ ಸಿಎಂ ಎಸ್‌ಐಟಿ ತನಿಖೆಗೆ ಆದೇಶಿಸಿದ್ದಾರೆ. ಎಸ್‌ಐಟಿ ವರದಿ ಬಂದ ನಂತರ ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದಿದ್ದಾರೆ.
ತಜ್ಞರ ಸಮಿತಿ ರಚನೆ ತುಪ್ಪ ಉತ್ಪಾದನಾ ವ್ಯವಸ್ಥೆಯನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ನೀಡಲು ವಿಶೇಷ ಸಮಿತಿಯನ್ನು ರಚಿಸಲಾಗಿದೆ.
Poll (Public Option)

Post a comment
Log in to write reviews