HDK ವಿರುದ್ಧ ಅವಾಚ್ಯ ಪದ ಬಳಕೆ ವಿಡಿಯೋ ವೈರಲ್- ತಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ!

ಮಂಡ್ಯ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿ ಬಿಟ್ಟಿರುವ ಮಂಗಳ ವಿರುದ್ಧ ಕ್ರಮಕ್ಕೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳ ಎಂಬ ಮಹಿಳೆ, ಕೇಂದ್ರ ಮಂತ್ರಿಗಳ ವಿರುದ್ಧ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸುತ್ತಾ ವಿಡಿಯೋ ಮಾಡಿ, ತನ್ನ ಫೇಸ್ ಬುಕ್ ಹಾಗೂ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಈ ಕುರಿತು ಕೂಡಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ಮುಖಂಡ, ವಕೀಲ ಎಂ.ಎಸ್. ರಘುನಂದನ್ ದೂರು ನೀಡಿದ್ದಾರೆ.
ದರ್ಶನ್ ಬಂಧನ ಪ್ರಕರಣಕ್ಕೂ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರಿಗೂ ಯಾವುದೇ ಸಂಬಂಧ ಇಲ್ಲ. ಆದರೂ ಅನಾವಶ್ಯಕವಾಗಿ ದರ್ಶನ್ ಪ್ರಕರಣದಲ್ಲಿ ಮಂತ್ರಿಗಳ ಹೆಸರನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳ, ಬಾಯಿಗೆ ಬಂದ ಹಾಗೆ ಬೈದಿದ್ದಾರೆ. ಆ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಜೆಡಿಎಸ್ ಕಾರ್ಯಕರ್ತರಿಗೆ, ಕುಮಾರಸ್ವಾಮಿ ಅಭಿಮಾನಿಗಳಿಗೆ ತೀವ್ರ ನೋವುಂಟುಮಾಡುತ್ತಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ಸೈಬರ್ ಕ್ರೈಂ ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.
Poll (Public Option)

Post a comment
Log in to write reviews