ಉತ್ತರ ಕನ್ನಡ: ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಿದ ಪ್ರಕರಣದಲ್ಲಿ ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆಗೆ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ. ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರೂ ಶ್ರೀನಗರ ಪಂಚಾಯತ್ ವತಿಯಿಂದ ನಡೆದ ಸಭೆ ಸಮಾರಂಭಗಳಿಗೆ ಅಂಗನವಾಡಿ ಕಾರ್ಯಕರ್ತೆಯಾಗಿ ಹಾಜರಾಗಿ ಸರ್ಕಾರದ ಸವಲತ್ತುಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಷಾ ಹೆಗಡೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ್ ತೀರ್ಪು ಪ್ರಕಟಿಸಿದರು. ಜಿ.ಪಂ.ಸದಸ್ಯರಾಗಿ ಅಧಿಕಾರದಲ್ಲಿದ್ದಾಗ 2011 ಜನವರಿಯಿಂದ 2012 ನವೆಂಬರ್ ರವರೆಗೆ ಅಂಗನವಾಡಿ ಕಾರ್ಯಕರ್ತೆಯೆಂದು ಜನಪ್ರತಿನಿಧಿಯಾದ ನಂತರವೂ ಅಂಗನವಾಡಿ ದಾಖಲೆ ತೋರಿಸಿ ಸರ್ಕಾರದಿಂದ ಗೌರವಧನ 88,630 ರೂ. ಪಡೆದು ವಂಚಿಸಿದ್ದರು
Post a comment
Log in to write reviews