ಟಾಪ್ 10 ನ್ಯೂಸ್
ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಜೂನ್ 01: ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನಮನೆಯಲ್ಲಿ ಇಂದು ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯ ನ್ಯಾಯಮೂತಿಗಳಾದ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂತಿಗಳು, ವಕೀಲರು, ಗಣ್ಯರುಗಳು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews