ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕು ಸರ್ಕಾರದ ವಿರುದ್ಧ ಗುಡುಗಿ ಸಭಾತ್ಯಾಗ ಮಾಡಿದ ಬಿಜೆಪಿ.
ಬೆಂಗಳೂರು : ಎರಡು ದಿನಗಳ ವಿರಾಮದ ಬಳಿಕ ರಾಜ್ಯ ವಿಧಾನಮಂಡಲ ಅಧಿವೇಶನ ಇಂದು ಮತ್ತೆ ಪುನರಾರಂಭಗೊಂಡಿದೆ. ಜುಲೈ 15ರಿಂದ ಆರಂಭವಾಗಿದ್ದ, ಕಲಾಪದಿಂದ ಇಲ್ಲಿಯವರೆಗೂ ವಾಲ್ಮೀಕಿ ಬಹುಕೋಟಿ ಹಗರಣವನ್ನು ಅಸ್ತ್ರವಾಗಿಟ್ಟುಕೊಂಡ ಬಿಜೆಪಿ ಇಂದು ಕೂಡ ಪ್ರತಿಭಟನೆ ಮುಂದುವರೆಸಿತ್ತು.
ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸದನದ ಬಾವಿಗಿಳಿದು ಹೋರಾಟ ಮುಂದುವರಿಸಿದ ಬಿಜೆಪಿ ನಾಯಕರು, ವಾಲ್ಮೀಕಿ ನಿಗಮ ಹಗರಣ ತನಿಖೆಯನ್ನ ಸಿಬಿಐಗೆ ಒಪ್ಪಿಸಿ ಎಂದು ಹೋರಾಟ ನಡೆಸಿದರು. ಆದರೆ ಸ್ಪೀಕರ್ ಯು.ಟಿ ಖಾದರ್ ಪ್ರತಿಭಟನಾ ಧರಣಿ ವಾಪಸ್ ಪಡೆಯಲು ವಿಪಕ್ಷ ಸದಸ್ಯರಿಗೆ ಮನವಿ ಮಾಡಿಕೊಂಡರು. ಹೀಗಾಗಿ ಬಿಜೆಪಿ ನಾಯಕರು ಧರಣಿ ವಾಪಸ್ ಪಡೆದದ್ದಾರೆ.
ಆದರೆ ವಾಲ್ಮೀಕಿ ನಿಗಮ ಹಗರಣದಲ್ಲಿ ಸರ್ಕಾರದ ಉತ್ತರಕ್ಕೆ ತೃಪ್ತರಾಗದೇ ಬಿಜೆಪಿ ನಾಯಕರು ಸಭಾತ್ಯಾಗ ಮಾಡಿದ್ದಾರೆ. ಆರ್.ಅಶೋಕ್ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದ ಬಿಜೆಪಿ ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕು. ರಾಜೀನಾಮೆ ಕೊಡೋವರೆಗೂ ಹೋರಾಟ ಮಾಡುತ್ತೇವೆ ಎಂದು ಸರ್ಕಾರದ ವಿರುದ್ಧ ಗುಡುಗಿ ಬಿಜೆಪಿ ನಾಯಕರು ಸಭಾತ್ಯಾಗ ಮಾಡಿದ್ದಾರೆ.
Post a comment
Log in to write reviews