
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭಾರೀ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ನಿಟ್ಟಿನಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ (ಜುಲೈ 10)ರ ಬೆಳಗ್ಗೆ, ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ಮಾಡಿದ್ದರು. ಈ ವೇಳೆ ನಿಗಮದಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ಮಾಡಿದ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ನನ್ನು ಬಂಧಿಸಿ, ಶಾಂತಿನಗರ ಇಡಿ ಕಚೇರಿಗೆ ಕರೆತರಲಾಗಿದೆ.
ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಬಂಧಿತ ಹರೀಶ್ ಪಾತ್ರ ಏನು ?
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸಿನ ವ್ಯವಹಾರದ ವೇಳೆ ಅಧಿಕಾರಿಗಳಿಗೆ ಸಚಿವ ನಾಗೇಂದ್ರನ ಆಪ್ತ ಹರೀಶ್ ಮೌಖಿಕವಾಗಿ ಒತ್ತಡ ಹಾಕಿರುತ್ತಾರೆ. ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಹೈದರಾಬಾದಿನ ಸತ್ಯನಾರಾಯಣ ವರ್ಮನಿಂದ ಬಂದ ಹಣ ಹರೀಶ್‌ಗೆ ಬಂದಿತ್ತು. ಏಪ್ರಿಲ್ ತಿಂಗಳ 2ನೇ ವಾರ ಪದ್ಮನಾಭನಿಂದ 25 ಲಕ್ಷ ರೂ. ಹಣ ಹರೀಶ್ ಪಡೆದಿದ್ದನು. ವಾಲ್ಮೀಕಿ ನಿಗಮದ ಅಧಿಕಾರಿ ಪದ್ಮನಾಭನೇ ಖುದ್ದು ಹಣ ನೀಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಬೆಂಗಳೂರಿನ ಬಿಬಿಎಂಪಿ ಕಚೇರಿಯ ಶ್ರೀನಿಧಿ ಸಾಗರ್ ಹೊಟೇಲ್ ಬಳಿ ಹಣ ನೀಡಲಾಗಿದೆಯಂತೆ. ಬಳಿಕ ಹವಳ, ಹಣ ಮತ್ತು ಚಿನ್ನದ ಬಿಸ್ಕೇಟ್‌ಗಳನ್ನ ನಾಗೇಂದ್ರ ಪರ ಪಡೆದಿರುವ ಬಗ್ಗೆ ಅನುಮಾನವಿದೆ. ಸಚಿವ ನಾಗೇಂದ್ರ ಪರ 50 ರಿಂದ 60 ಕೋಟಿ ಹಣದ ವ್ಯವಹಾರ ಶಂಕೆಯಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗೆ ಹರೀಶ್‌ನ ಬಂಧಿಸಿ ವಿಚಾರಣೆ ಮಾಡಲಾಗುತ್ತದೆ.
Poll (Public Option)

Post a comment
Log in to write reviews