
ಶಿವಮೊಗ್ಗ: ಶಿವಮೊಗ್ಗ ಶಿಕಾರಿಪುರ ಕಾಮಗಾರಿ 2026 ರೊಳಗೆ ಪೂರ್ಣಗೊಳಿಸುತ್ತೇವೆ. ಈಗಾಗಲೇ ರೈಲ್ವೆ ಯೋಜನೆಯ ಕೆಲಸ ಆರಂಭವಾಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲನೆ ನಡೆಸಿ ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ, ಮುಂದಿನ ಜೂನ್ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು ಹೇಳಿದರು.
ರೈಲ್ವೆ ಇಲಾಖೆಯ ಐತಿಹಾಸಿಕ ಕಾರ್ಯಗಳನ್ನು ಮೋದಿ ಮೂರನೇ ಬಾರಿ ಪ್ರಧಾನಿಯಾದ ಮೇಲೆ ಮಾಡುತ್ತಿದೆ. ಕರ್ನಾಟಕದಲ್ಲಿ ಅದರಲ್ಲೂ , ಶಿವಮೊಗ್ಗದಲ್ಲೇ ಕೋಚಿಂಗ್ ಡಿಪೋ ಸಿದ್ಧವಾಗುತ್ತಿರುವುದು ಗಮನಾರ್ಹ ಎಂದು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಸೋಮಣ್ಣ ಪ್ರತಿಕ್ರಿಯೆ ನೀಡಿದರು.
ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದ ಹಾಗೆ. ರೈಲ್ವೆ ಇಲಾಖೆಯಲ್ಲಿ ಕಳಪೆ ಕಾಮಗಾರಿ ಸಹಿಸಲ್ಲ. ಇನ್ನು ಎರಡರಿಂದ ಮೂರು ತಿಂಗಳಲ್ಲಿ ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಬರಲಿದೆ ಎಂದು ಅವರು ಹೇಳಿದರು.
ರೈಲ್ವೆ ಕೋಚಿಂಗ್ ಡಿಪೋ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕೋಟೆ ಗಂಗೂರಿನಲ್ಲಿ ನಿರ್ಮಾಣ ಆಗುತ್ತಿದ್ದು, ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ.
ರೈಲ್ವೆ ಅಧಿಕಾರಿಗಳೊಂದಿಗೆ ಕಾಮಗಾರಿ ವಿಕ್ಷಣೆ ಮಾಡಿದ ಸೋಮಣ್ಣಗೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಶಾಸಕ ಚನ್ನಬಸಪ್ಪ, ಎಂಎಲ್ಸಿ ಡಿಎಸ್ ಅರುಣ್, ಡಾ. ಧನಂಜಯ ಸರ್ಜಿ ಸಾಥ್ ನೀಡಿದರು.
Poll (Public Option)

Post a comment
Log in to write reviews