
ಬೆಂಗಳೂರು: ಸುರಕ್ಷತಾ ತಪಾಸಣೆಯಿಂದಾಗಿ ಅ. 3ರ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ನಾಗಸಂದ್ರ ಮತ್ತು ಮಾದವಾ ಮೆಟ್ರೋ ನಿಲ್ದಾಣಗಳ ನಡುವೆ ಹಸಿರು ಮಾರ್ಗದಲ್ಲಿ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಈ ಅವಧಿಯಲ್ಲಿ ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ನಾಗಸಂದ್ರ ಮತ್ತು ಮಾದವಾರ ನಿಲ್ದಾಣಗಳ ನಡುವಿನ ಹೊಸ ಮಾರ್ಗವನ್ನು ಮೆಟ್ರೋ ರೈಲ್ವೆ ಸುರಕ್ಷತ ಆಯುಕ್ತರಿಂದ ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ, ದಿನಾಂಕ 3ನೇ ಅಕ್ಟೋಬರ್ 2024 ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬದಲಾವಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಗುರುವಾರ ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಾಣಿಜ್ಯ ಸೇವೆ ಲಭ್ಯವಿರುವುದಿಲ್ಲ ಎಂದು ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
Poll (Public Option)

Post a comment
Log in to write reviews