ಮತ್ತೆ ರಾಜ್ಯದಲ್ಲಿ ಆರ್ಭಟಿಸಲಿರುವ ವರುಣ: ಪರಿಸ್ಥಿತಿ ಎದುರಿಸಲು ಸಜ್ಜಾಗಿ ಎಂದು ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಆ.14ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
ದಕ್ಷಿಣ ಒಳನಾಡು ಪ್ರದೇಶವನ್ನು ಹೊರತುಪಡಿಸಿ ಉಳಿದೆಡೆಗಳಲ್ಲಿ ನೈರುತ್ಯ ಮುಂಗಾರು ಆಗಮಿಸಿದೆ. ಅದಾಗ್ಯೂ ಆಗಸ್ಟ್ 14ರ ನಂತರ ಕಿತ್ತೂರು ಕರ್ನಾಟಕ ಮತ್ತು ಮಲೆನಾಡು ಪ್ರದೇಶಗಳಲ್ಲಿ ಆಗಸ್ಟ್ 20 ರವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆಗಳಿವೆ.
ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ಹಾಗೂ ಕೃಷ್ಣ-ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಜೀವಹಾನಿಯಂತಹ ಅನಾಹುತ ತಪ್ಪಿಸಲು ಮತ್ತಷ್ಟು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಮಳೆಯಾಗುವ ಸಂದರ್ಭದಲ್ಲಿ ನದಿ ಉಕ್ಕಿಹರಿಯುತ್ತದೆ, ಇದೇ ವೇಳೆ ಅಣೆಕಟ್ಟೆಗಳಿಂದಲೂ ನೀರು ಹರಿಸಿದರೆ ಪ್ರವಾಹ ಸ್ಥಿತಿ ಉಂಟಾಗಿ ಜನ ಪರಿತಪಿಸುವ ಸ್ಥಿತಿ ಎದುರಾಗುತ್ತದೆ, ಇನ್ನು ಮನೆಯೊಳಗೆ ನೀರು ಬರುವುದು, ವಾಹನ ಸಂಚಾರ ಅಸಾಧ್ಯವಾಗುವುದು ಇನ್ನಿತರ ವಿಷಯಗಳ ಬಗ್ಗೆ ಗಮನವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಹೇಳಿದೆ.
Post a comment
Log in to write reviews