
ಬೆಂಗಳೂರು: ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ ಹೊಂದಿದ್ದಾರೆ. ವಿಜಯ ಕರ್ನಾಟಕ ಸೇರಿದಂತೆ ವಿವಿಧ ಕನ್ನಡ ದಿನ ಪತ್ರಿಕೆಗಳಲ್ಲಿ ಕಾರ್ಯ ನಿರ್ವಯಿಸಿದ್ದರು.
59 ವರ್ಷದ ವಸಂತ ನಾಡಿಗೇರ ಸೋಮವಾರ ಮುಂಜಾನೆ 3.15ರ ಸುಮಾರಿಗೆ ಹೃದಯಾ ಘಾತದಿಂದ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಸುಮಾರು ಮೂರು ದಶಕಕ್ಕೂ ಅಧಿಕ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು.
ಇವರ ನಿಧನಕ್ಕೆ ಸಿ ಎಂ ಸಿದ್ಧರಾಮಯ್ಯ ಅವರು ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಎಂದು ಸಂತಾಪ ಸೂಚಿಸಿದ್ದಾರೆ.
Poll (Public Option)

Post a comment
Log in to write reviews