ವಯನಾಡ್: ಪ್ರಿಯಾಂಕಾ ಗಾಂಧಿ ಅವರು ಈ ಕ್ಷೇತ್ರದಲ್ಲಿ ಅತ್ಯಂತ ಬಹುಮತದಿಂದ ಜಯಗಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ಅವರು ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದು, ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.
ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರ ಸ್ಪರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.
Post a comment
Log in to write reviews