
ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ರಾಜ್ಯದ ಆರು ವಿಧಾನಪರಿಷತ್ ಸ್ಥಾನಗಳಿಗೆ ಮತದಾನ ಪ್ರಗತಿಯಲ್ಲಿದ್ದು ಮಧ್ಯಾಹ್ನದ ವೇಳೆ ಮತದಾನ ಚುರುಕಾಗಿ ನಡೆದಿತ್ತು.
ಕಾಂಗ್ರೆಸ್ ಎಲ್ಲಾ ಆರು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆದರೆ ಬಿಜೆಪಿ 4, ಜೆಡಿಎಸ್ 2 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು, ಬಿಜೆಪಿ- ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸುತ್ತಿವೆ. ಆರು ಕ್ಷೇತ್ರಗಳಲ್ಲಿ ಒಟ್ಟು 78 ಸ್ಪರ್ಧಿಗಳು ಕಣಕ್ಕಿಳಿದಿದ್ದು. ಮೇಲ್ಮನೆ ಎಂದೇ ಕರೆಯಲ್ಪಡುವ ವಿಧಾನ ಪರಿಷತ್ತಿನಲ್ಲಿ ಬಹುಮತ ಪಡೆಯಲು ಕಾಂಗ್ರೆಸ್ ಎಲ್ಲಾ ಆರು ಸ್ಥಾನ ಗೆಲ್ಲಲು ಸರ್ವಪ್ರಯತ್ನ ನಡೆಸುತ್ತಿದೆ.
Poll (Public Option)

Post a comment
Log in to write reviews