
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಅರ್ಜಿ ಅಲ್ಲಿಸಲು ಮೇ 4 ಕೊನೆ ದಿನವಾಗಿತ್ತು. ಆದರೂ ಸಾರ್ವಜನಿಕರ ಮನವಿ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಮೇ18 ಕೊನೆ ದಿನ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಂದು ಸಾವಿರ ಖಾಲಿ ಹುದ್ದೆಗಳಿಗೆ ಇದುವರೆಗೂ ಒಂಬತ್ತು ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ ನಾಲ್ಕು ಲಕ್ಷ ಮಂದಿ ಶುಲ್ಕ ಪಾವತಿಸಿದ್ದಾರೆ ಎಂದು ಅವರು ವಿವರಿಸಿದ್ದಾರೆ.
Poll (Public Option)

Post a comment
Log in to write reviews