
ಹೆಚ್.ಡಿ.ಕೋಟೆ: ತುಂಬಸೋಗೆ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದ್ದು, ಸಮರ್ಪಕ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲಗೊಂಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಬಿನಿ ಜಲಾಶಯ ಇರುವ ತಾಣದಲ್ಲೇ ನೀರಿಗೆ ಹಾಹಾಕಾರ ಉಂಟಾಗಿದೆ. ಹೆಚ್ ಡಿ ಕೋಟೆ ತಾಲೂಕಿನ ತುಂಬಸೋಗೆ ಗ್ರಾಮದಲ್ಲಿ ಕುಡಿಯುವ ನೀರಿನ ಬರ ಬಂದಿದೆ. ಗ್ರಾಮಕ್ಕೆ ಐದರಿಂದ ಆರು ದಿನಗಳಿಗೊಮ್ಮೆ ನೀರು ಬಿಡುತ್ತಾರೆ. ಆದರೂ ಸರಿಯಾಗಿ ಮನೆಗಳಿಗೆ ನೀರು ತಲುಪದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಹಲವು ವರ್ಷದಿಂದ ಇದೇ ಪರಿಸ್ಥಿತಿ ಇದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
Poll (Public Option)

Post a comment
Log in to write reviews