
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರೆದಿದ್ದು, ನಾಲ್ವರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಸೇರಿದಂತೆ ಐವರು ಗುಂಡಿನ ದಾಳಿಗೆ ಬಲಿಯಾದ ಘಟನೆಯು ಜಿರಿಬಾಮ್ ಜಿಲ್ಲೆಯಲ್ಲಿ ನಡೆದಿದೆ.
ನಿದ್ದೆಯಲ್ಲಿರುವಾಗಲೇ ಓರ್ವ ವ್ಯಕ್ತಿಯನ್ನು ಗುಂಡು ಹಾರಿಸಿ ಕೊಂದ ಘಟನೆಯ ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 5 ಕಿಮೀ ದೂರದ ಪ್ರದೇಶದಲ್ಲಿ ಒಬ್ಬನೇ ವಾಸಿಸುತ್ತಿದ್ದ ಮನೆಗೆ ನುಗ್ಗಿದ ದುಷ್ಕರ್ಮಿಗಳು ನಿದ್ದೆಯಲ್ಲಿರುವಾಗಲೇ ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ , ಜಿಲ್ಲಾ ಕೇಂದ್ರದಿಂದ 7 ಕಿಮೀ ದೂರದಲ್ಲಿರುವ ಬೆಟ್ಟದಲ್ಲಿ ಗುಂಡಿನ ಚಕಮಕಿ ನಡೆದಿದೆ ಎನ್ನಲಾಗಿದ್ದು ನಾಲ್ವರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮೃತಪಟ್ಟಿದ್ದಾರೆ. ಎಂದು ತಿಳಿದು ಬಂದಿದೆ.
Poll (Public Option)

Post a comment
Log in to write reviews