
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೆಎಸ್ಆರ್‌ಟಿಸಿಯ ಹೊಸ Volvo 9600 Multiaxle ಸೀಟರ್ ಪ್ರೋಟೋಟೈಪ್ ಬಸ್ಸನ್ನು ಇಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಅವರು ಪರಿವೀಕ್ಷಣೆ ನಡೆಸಿದರು.
ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇರನ್ನಿಂಗ್ ಲೈಟ್‌ಗಳೊಂದಿಗೆ ಡಿಆರ್‌ಎಲ್ ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ಣು ತಣಿಸುವ ಸೌಂದರ್ಯ. ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. ನವೀನ ತಂತ್ರಜ್ಞಾನ ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್ ಕೆಎಂಪಿಎಲ್ ನೀಡುತ್ತದೆ.
ಒಟ್ಟಾರೆ ಬಸ್ಸಿನ ಉದ್ದದಲ್ಲಿ ಶೇ3.5 ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಾಗಿದೆ. ಒಟ್ಟಾರೆ ಬಸ್ಸಿನ ಎತ್ತರದಲ್ಲಿ ಶೇ 5.6 ರಷ್ಟು ಹೆಚ್ಚಳ ಇರುವುದರಿಂದ ಹೆಚ್ಚಿನ ಹೆಡ್ ರೂಂ ಇರುತ್ತದೆ.
Poll (Public Option)

Post a comment
Log in to write reviews